ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ ಗುಜರಾತ್ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಹಿಂದಿನ ಯುಪಿಎ ಸರ್ಕಾರ 2014ರ ಜನವರಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿತ್ತು.
ಅಹಮದಾಬಾದ್ (ಗುಜರಾತ್), ಮೇ ೮, ೨೦೧೬ : ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ ಗುಜರಾತ್ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.
ಹಿಂದಿನ ಯುಪಿಎ ಸರ್ಕಾರ 2014ರ ಜನವರಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಜೈನ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿತ್ತು.
‘ಪಾತಿದಾರ್ ಮೀಸಲಾತಿ ಚಳವಳಿಯ ಕಾರಣದಿಂದಾಗಿ ಸರ್ಕಾರದ ನಿರ್ಧಾರವನ್ನು ತಡೆ ಹಿಡಿಯಲಾಗಿತ್ತು’ ಎಂದು ಜೈನ ಸಮುದಾಯಕ್ಕೆ ಸೇರಿದ ಸಾರಿಗೆ ಸಚಿವ ವಿಜಯ್ ರೂಪಾನಿ ಹೇಳಿದ್ದಾರೆ. – ಕೃಪೆ: ಪ್ರಜಾವಾಣಿ