Skip to content
Home » ಕನ್ನಡ » ಸುದ್ದಿ-ಸಮಾಚಾರ » ಮಸ್ತಕಾಭಿಷೇಕಕ್ಕೆ ₹500 ಕೋಟಿ ನೆರವಿಗೆ ಕೋರಿಕೆ

ಮಸ್ತಕಾಭಿಷೇಕಕ್ಕೆ ₹500 ಕೋಟಿ ನೆರವಿಗೆ ಕೋರಿಕೆ

    ಮುಂದಿನ ವರ್ಷ ಗೊಮ್ಮಟೇಶ್ವರ ಮೂರ್ತಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಜರುಗುವುದರಿಂದ ಶ್ರವಣಬೆಳಗೊಳ ಮತ್ತು ಸುತ್ತಮುತ್ತ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ₹ 500 ಕೋಟಿ ನೆರವನ್ನು ಬಿಡುಗಡೆ ಮಾಡುವಂತೆ ಸಂಸದ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದ್ದಾರೆ.

     

    Gowda seeks 500 crore for Mahamastakabhisheka

    Gowda seeks 500 crore for Mahamastakabhisheka

    ನವದೆಹಲಿ, ಫೆಬ್ರವರಿ ೨೩, ೨೦೧೭: ಮುಂದಿನ ವರ್ಷ ಗೊಮ್ಮಟೇಶ್ವರ ಮೂರ್ತಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಜರುಗುವುದರಿಂದ ಶ್ರವಣಬೆಳಗೊಳ ಮತ್ತು ಸುತ್ತಮುತ್ತ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ₹ 500 ಕೋಟಿ ನೆರವನ್ನು ಬಿಡುಗಡೆ ಮಾಡುವಂತೆ ಸಂಸದ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದ್ದಾರೆ.

    ಈ ಮುನ್ನ ತಾವು ಮಾಡಿದ್ದ ಇದೇ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ತಿರಸ್ಕರಿಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿ ಮಾಡಿ ಸರ್ಕಾರದ ನಿರ್ಧಾರವನ್ನು ಮರು ಪರಿಗಣಿಸುವಂತೆ ಕೋರಿದ್ದಾಗಿ ಅವರು ತಿಳಿಸಿದರು.

    ಮಹೋತ್ಸವಕ್ಕೆ ದೇಶ ವಿದೇಶಗಳಿಂದ ದೊಡ್ಡ ಸಂಖ್ಯೆಯಲ್ಲಿ ಬರುವ ತೀರ್ಥಯಾತ್ರಿಗಳಿಗೆ ಉತ್ತಮ ರಸ್ತೆ, ಕುಡಿಯುವ ನೀರು ಮುಂತಾದ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರದ ಜತೆ ಕೇಂದ್ರವೂ ಕೈಜೋಡಿಸಬೇಕು ಎಂದು ಆಗ್ರಹಿಸಿದರು.

    ರಾಜ್ಯದಲ್ಲಿ ನೆಲೆಸಿರುವ ತೀವ್ರ ಬರ ಪರಿಸ್ಥಿತಿಯ ಕಷ್ಟನಷ್ಟಗಳನ್ನೂ ಪ್ರಧಾನಿಯವರ ಗಮನಕ್ಕೆ ತಂದು ಹೆಚ್ಚುವರಿ ಆರ್ಥಿಕ ನೆರವನ್ನು ಬಿಡುಗಡೆ ಮಾಡುವಂತೆ ಒತ್ತಾಯಪಡಿಸಿದ್ದಾಗಿಯೂ ಅವರು ವಿವರಿಸಿದರು.

    ಹಾಸನದಲ್ಲಿ ಉಂಟಾಗಿರುವ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಪಡಿಸಿ ಶಿವರಾತ್ರಿಯ ನಂತರ ಶನಿವಾರದಿಂದ ಧರಣಿ ಸತ್ಯಾಗ್ರಹ ಆರಂಭಿಸುವುದಾಗಿ ಅವರು ಪ್ರಕಟಿಸಿದರು. ಉಪವಾಸ ಸತ್ಯಾಗ್ರಹ ನಡೆಸುವುದು ಈ ಇಳಿ ವಯಸ್ಸಿನಲ್ಲಿ ತಮ್ಮಿಂದ ಸಾಧ್ಯವಿಲ್ಲ ಎಂದರು.

    ‘ಯಗಚಿಯಿಂದ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಅಧಿಕಾರಿಗಳು ಗೊಂದಲ ಮೂಡಿಸಿದ್ದಾರೆ. ಹಾಸನದ ಹತ್ತು ವಾರ್ಡ್ ಗಳಲ್ಲಿ ನೀರಿಗಾಗಿ ತಹತಹ ಉಂಟಾಗಿದೆ. ಶಿವರಾತ್ರಿಯಂದು ಸ್ನಾನ ಮಾಡಲು ನೀರಿಲ್ಲವೆಂದು ಜನ ದೂರತೊಡಗಿದ್ದಾರೆ. ಕುಡಿಯುವ ನೀರು ಪೂರೈಕೆ ವ್ಯತ್ಯಯ ಆಗುವುದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆ ಹುಸಿಯಾಗಿದೆ ಎಂದರು. – ಕೃಪೆ: ಪ್ರಜಾವಾಣಿ

    error: Jain Heritage Centres - Celebrating Jain Heritage.....Globally!